1¶ ‹“ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ,›‹ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು.›‹ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನು›‹ಸತ್ತವನಾಗಿರುವೆ.›
2¶ ‹“ಎಚ್ಚರವಾಗು, ಸಾಯುವ ಹಾಗಿರುವ›‹ಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಪರಿಪೂರ್ಣವಾದದ್ದೆಂದು ನನಗೆ ಕಂಡುಬರಲಿಲ್ಲ.›
3‹ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ›‹ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.›
4‹ಆದರೂ›‹ತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರು›‹ಯೋಗ್ಯರಾಗಿರುವುದರಿಂದ›‹ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.›
5‹ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು.›‹ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ,›‹ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.›
8‹ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ›‹ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.›
9‹ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು›‹ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು›‹ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.›
10‹ಸೈರಣೆಯಿಂದಿರಬೇಕೆಂಬ›‹ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ,›‹ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.›
11‹ನಾನು›‹ಬೇಗನೇ ಬರುತ್ತೇನೆ,›‹ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.›
12‹ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ›‹ಸ್ತಂಭವಾಗಿ ನಿಲ್ಲಿಸುವೆನು.›‹ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ›‹ನನ್ನ ದೇವರ ಹೆಸರನ್ನು, ನನ್ನ›‹ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ,›‹ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.›
14¶ ‹“ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ,›‹ದೇವರ ಸೃಷ್ಟಿಗೆ ಮೂಲನೂ ಆಗಿರುವ›‹‘ಆಮೆನ್’ ಎಂಬಾತನು›‹ಹೇಳುವುದೇನಂದರೆ,›
15‹ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು.›
16‹ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು.›
17‹ನೀನು ನಿನ್ನ ವಿಷಯದಲ್ಲಿ›‹ನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು,›‹ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.›
18‹ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ,›‹ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ›‹ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ›‹ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.›
19‹ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.›
20‹ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ.›‹ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ›‹ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.›
21‹ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ›‹ಜಯಶಾಲಿಯಾದವನಿಗೆ›‹ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.›